ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸಿಎಂ ಸಿದ್ದರಾಮಯ್ಯ
ASHWASURYA/SHIVAMOGGA
✍️ ಸುಧೀರ್ ವಿಧಾತ
ಅಶ್ವಸೂರ್ಯ/ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಮನಸ್ಸು ಮಾಡಿದ್ದು , ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ಸೇವಿಸಿದ ಬಳಿಕ ವರದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ರಾಜ್ಯ ಸರ್ಕಾರ ಸ್ಥಳೀಯ ಸಂಘ–ಸಂಸ್ಥೆಗಳಿಗೆ ಚುನಾವಣೆ ನಡೆಸದಿದ್ದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಚುನಾವಣಾ ಆಯೋಗ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ಬಳಿಕ ಬೃಹತ್ ಬೆಂಗಳೂರು ಮಹಾನಹರ ಪಾಲಿಕೆಗೂ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೂ ದಿನಾಂಕ ನಿಗದಿ ಆಗೋತ್ತಾ..?
ಇದೇ ವೇಳೆ ತಮ್ಮ ಪುತ್ರ ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಸಿಎಂ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ತಮಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಾಗಲೇ ಪಕ್ಷದ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡುವ ಭರವಸೆ ನೀಡಿತ್ತು. ಈಗಲೂ ಅದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾವಣೆಯು ಸೆಪ್ಟೆಂಬರ್ ತಿಂಗಳಲ್ಲಿ ನೆಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ