ಬ್ರಹ್ಮವರದ ಪ್ರತಿಷ್ಠಿತ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತಯಾಚನೆ
ASHWASURYA/SHIVAMOGGA
SUDHIR VIDHATA
ಅಶ್ವಸೂರ್ಯ/ಶಿವಮೊಗ್ಗ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ , ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.
ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಮಹೇಶ್ ಆಸ್ಪತ್ರೆಯಲ್ಲಿ ಮತಯಾಚನೆ ಮಾಡಿದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಸಾಥ್
ಬ್ರಹ್ಮವರ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಮಹೇಶ್ ಆಸ್ಪತ್ರೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರೊಂದಿಗೆ ಭೇಟಿ ನೀಡಿ ಹೆಸರಾಂತ ಮಕ್ಕಳ ತಜ್ಞ ಮತ್ತು ಮಹೇಶ್ ಆಸ್ಪತ್ರೆಯ ವೈದಕೀಯ ನೀರ್ದೇಶಕರಾದ ಡಾ.ರಾಕೇಶ್ ಅಡಿಗ, ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.
ಬ್ರಹ್ಮವರ ತಾಲೂಕಿನ ಇಂಡೆವೊರ್ ಸಾಫ್ಟ್ -ಟೆಕ್ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ಮಾಡಿದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾಕ್ಟರ್ ಧನಂಜಯ ಸರ್ಜಿ
ಬ್ರಹ್ಮವರ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಇಂಡೆವೊರ್ ಸಾಫ್ಟ್ -ಟೆಕ್ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ , ಸಿಬ್ಬಂದಿ ವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆ
ಕಾಪು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು , ವಾರ್ಡ್ ಅಧ್ಯಕ್ಷರು ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು