ಭಾರತ vs ಪಾಕಿಸ್ತಾನ, T20 ವಿಶ್ವಕಪ್ 2024: ಪಾಕಿಸ್ತಾನವನ್ನು 6 ರನ್‌ಗಳಿಂದ ಬಗ್ಗು ಬಡಿದ ಭಾರತ
news.ashwasurya.in
✍️ Sudhir vidhata
ಅಶ್ವಸೂರ್ಯ/ಶಿವಮೊಗ್ಗ:T20 ವಿಶ್ವಕಪ್ ನ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 6 ರನ್ ಗಳಿಂದ ಬಗ್ಗು ಬಡಿಯಿತು ಭಾರತ ತಂಡದ ನಂಬಿಕಸ್ಥ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಪಾಂಡ್ಯ ಅವರ ದಾಳಿಗೆ ಪಾಕ್ ಪತರುಗುಟ್ಟಿತು.
ಮೊದಲು ಬ್ಯಾಟ್ ಮಾಡಿದ ಭಾರತ ತಂಡ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಕೊಯ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಬೇಗನೆ ಕಳೆದುಕೊಂಡು ಕೇವಲ 119 ರನ್‌ಗಳನ್ನು ಗಳಿಸಲಷ್ಟೆ ಶಕ್ತವಾಯಿತು. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ಈ ಪಂದ್ಯ ನೆಡೆಯಿತು. ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಆರು ರನ್‌ಗಳಿಂದ ಸೋಲಿಸಿತು. ಪಾಕಿಸ್ತಾನತಂಡದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಭಾರತ ನೀಡಿದ 120ರನ್ ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಪಾಕಿಸ್ತಾನಕ್ಕೆ ಉತ್ತಮ ಆರಂಭವನ್ನು ನೀಡಿದರು.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಪಾಕ್ ತಂಡವು ತನ್ನ ನಿರ್ಧಾರ ಸರಿ ಎನ್ನುವಂತೆ ಟೀಮ್ ಇಂಡಿಯಾದ ಪ್ರಮುಖ ಬ್ಯಾಟ್ಸ್‌ಮನ್ ಗಳನ್ನು ನಿಯಂತ್ರಿಸುವಲ್ಲಿ ಪಾಕ್ ಬೌಲರ್ ಗಳು ಯಶಸ್ವಿಯಾದರು.ಒಂದೆಡೆ ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಆರಂಭದಲ್ಲಿಯೇ ವಿರಾಟ್ ಕೊಹ್ಲಿ ಅವರನ್ನು ತಂಡದಮೊತ್ತ 12 ರನ್ ಗಳಾಗಿದ್ದಾಗ ವಿಕೆಟ್ ಕಳೆದುಕೊಂಡು ಆಘಾತವನ್ನು ಎದುರಿಸಿತು.
ಇದಾದ ನಂತರ ಕೇವಲ 19 ರನ್ ಗಳಾಗುವಷ್ಟರಲ್ಲಿ ರೋಹಿತ್ ಶರ್ಮಾ ಕೂಡ ಔಟಾದರು.ಒಂದೆಡೆ ವಿಕೆಟ್ ಹೋಗುತ್ತಿದ್ದರೆ ಇನ್ನೊಂದೆಡೆಗೆ ಸ್ಪೋಟಕ ಬ್ಯಾಟಿಂಗ್ ಗೆ ಮುಂದಾದ ರಿಶಬ್ ಪಂತ್ ಕೇವಲ 31 ಎಸೆತಗಳಲ್ಲಿ ಆರು ಬೌಂಡರಿಗಳ ನೆರವಿನೊಂದಿಗೆ 42 ರನ್ ಗಳಿಸಿದರು.ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ಸೂರ್ಯಕುಮಾರ್ 20 ರನ್ ಗಳಿಸಿದರು.ನಂತರ ಬಂದಂತಹ ಯಾವುದೇ ಆಟಗಾರ ಕೂಡ ಎರಡು ಅಂಕಿಗಳ ಮೊತ್ತ ವನ್ನು ಗಳಿಸಲಿಲ್ಲ ಅಂತಿಮವಾಗಿ ಟೀಮ್ ಇಂಡಿಯಾ 19 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 119 ರನ್ ಗಳ ಸಾಧಾರಣ ಮೊತ್ತವನ್ನು ಗಳಿಸಿತು.
ಇನ್ನೊಂದೆಡೆಗೆ ಸಾಧಾರಣ ಗೆಲುವಿನ ಗುರಿಯನ್ನು ಬೆನ್ನತ್ತಿದ್ದ ಪಾಕ್ ತಂಡಕ್ಕೆ ಟೀಮ್ ಇಂಡಿಯಾದ ಬೌಲರ್ ಗಳು ಮಾರಕವಾಗಿ ಪರಿಣಮಿಸಿದರು.ಭಾರತದ ಪರವಾಗಿ ಬಿಗುವಿನ ಬೌಲಿಂಗ್ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಹಾಗೂ ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಾಕ್ ರನ್ ಗತಿಗೆ ಕಡಿವಾಣ ಹಾಕಿದರು.
ಅಂತಿಮವಾಗಿ ಕೊನೆಯ ಓವರ್ ನಲ್ಲಿ ಕೇವಲ 6 ಎಸೆತಗಳಲ್ಲಿ 18 ರನ್ ಗಳ ಅಗತ್ಯತೆ ಇದ್ದಾಗ ಪಾಕ್ ಕೇವಲ 13 ರನ್ ಗಳನ್ನು ಮಾತ್ರಗಳಿಸುವಲ್ಲಿ ಯಶಸ್ವಿಯಾಯಿತು.ಇದರಿಂದಾಗಿ ಪಾಕ್ ತಂಡವು 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 113 ರನ್ ಗಳನ್ನು ಮಾತ್ರ ಗಳಿಸಿದ್ದರಿಂದಾಗಿ ಆರು ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.