ರೇಣುಕಾಸ್ವಾಮಿ ಹತ್ಯೆ ಹಿನ್ನಲೆಯಲ್ಲಿ ನಟ ದರ್ಶನ್ ಬಂಧನ : ಏನಿದು ಪ್ರಕರಣ? ಪೊಲೀಸ್ ಆಯುಕ್ತರು ಹೇಳಿದ್ದೇನು?

ಬೆಂಗಳೂರು ನಗರ ಪೋಲಿಸ್ ಆಯುಕ್ತರಾದ ದಯಾನಂದ್

ರೇಣುಕಾಸ್ವಾಮಿ ಹತ್ಯೆ ಹಿನ್ನಲೆಯಲ್ಲಿ ನಟ ದರ್ಶನ್ ಬಂಧನ : ಏನಿದು ಪ್ರಕರಣ? ಪೊಲೀಸ್ ಆಯುಕ್ತರು ಹೇಳಿದ್ದೇನು?

news.ashwasurya.in/Shivamogga

SUDHIR VIDHATA

ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಕೊಳೆತ ಸ್ಥಿತಿಯಲ್ಲಿ ಸಿಕ್ಕ ಶವ ಒಂದರ ತನಿಖೆಗೆ ಮುಂದಾದ‌ ಪೋಲಿಸರಿಗೆ ಸಿಕ್ಕ ಮಾಹಿತಿಯಂತೆ ಕೊಲೆಯಾದ ವ್ಯಕ್ತಿ ಚಿತ್ರದುರ್ಗ ಮೂಲದ 33 ವರ್ಷದ ರೇಣುಕಾಸ್ವಾಮಿ ಎಂದು ಗೊತ್ತಾಗಿದೆ. ಕನ್ನಡ ಚಿತ್ರರಂಗದ ಸ್ಟಾರ್ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಬೆಂಗಳೂರಿನಲ್ಲಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿದರು. ಜೂನ್ 9ರ ಶನಿವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿರ ಶವ ಪತ್ತೆಯಾಗಿತ್ತು. ತನಿಖೆ ವೇಳೆ ಕೊಲೆಯಾದ ವ್ಯಕ್ತಿ ಚಿತ್ರದುರ್ಗ ಮೂಲದ 33 ವರ್ಷದ ರೇಣುಕಾಸ್ವಾಮಿ ಎಂದು ಗೊತ್ತಾಗಿದೆ. ಕನ್ನಡ ಚಿತ್ರರಂಗದ ನಟ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಕೊಲೆಯಾದ ವ್ಯಕ್ತಿ ನಟನ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸುಮಾರು 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲು ಆಗಲ್ಲ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 

ಉದ್ಯಮಿ ವಿನಯ್ ಅವರ ಕಾರ್ ಶೆಡ್‌ನಲ್ಲಿ ಕೊಲೆ ನೆಡೆದಿದೆ.?
ದರ್ಶನ್ ಆಪ್ತ ಮೈಸೂರಿನ ಬ್ಲ್ಯೂ ರಾಡಿಸನ್ ಹೋಟೆಲ್ ಮಾಲೀಕ, ಉದ್ಯಮಿ ವಿನಯ್ ಕಾರ್ ಶೆಡ್‌ನಲ್ಲಿ ಕೊಲೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಯಾದ ರೇಣುಕಾಸ್ವಾಮಿ, ದರ್ಶನ್ ಫ್ಯಾನ್ ಅಸೋಸಿಯೇಷನ್ ಸದಸ್ಯನೂ ಆಗಿದ್ದನು. ದರ್ಶನ್ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದರಿಂದ ಕೋಪಗೊಂಡ ದರ್ಶನ್, ಚಿತ್ರದುರ್ಗದ ಫ್ಯಾನ್ ಅಸೋಶಿಯೇಷನ್ ಅಧ್ಯಕ್ಷ ರಾಘವೇಂದ್ರ ಮೂಲಕ ರೇಣುಕಾಸ್ವಾಮಿಯನ್ನು ಕರೆಸಿಕೊಳ್ಳಲಾಗಿತ್ತು. ಕಾರ್ ಶೆಡ್‌ನಲ್ಲಿ ಕಬ್ಬಿಣದ ರಾಡ್‌ನಿಂದ ತಲೆ ಹೊಡೆಯಲಾಗಿದೆ. ಹಲ್ಲೆಯ ತೀವ್ರತೆ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ.

ಈ ಸಂದರ್ಭದಲ್ಲಿ ದರ್ಶನ್ ಅಲ್ಲೇ ಇದ್ದರು ಎಂದು ತಿಳಿದು ಬಂದಿದೆ. ದರ್ಶನ್ ಆಪ್ತ ವಿನಯ್‌ನನ್ನು ಸಹ ಪೊಲೀಸರು ಬಂಧಿಸಿದ್ದಾರೆ.
ವರ್ಷದ ಹಿಂದೆ ಮದುವೆಯಾಗಿದ್ದ ರೇಣುಕಾಸ್ವಾಮಿ. 
ಕೊಲೆಯಾದ ರೇಣುಕಾಸ್ವಾಮಿ ವರ್ಷದ ಹಿಂದೆಯೇ ಮದುವೆಯಾಗಿದ್ದನು. ರೇಣುಕಾಸ್ವಾಮಿ ಪತ್ನಿ ಗರ್ಭಿಣಿಯಾಗಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶನಿವಾರ ಕೆಲಸಕ್ಕೆ ಹೋದ ಮಗ ಮನೆಗೆ ಹಿಂದಿರುಗಿ ಬಂದಿಲ್ಲ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು ಹಾಕಿದರು.

 ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಶನಿವಾರ ಮನೆಯಿಂದ ಹೊರಟವನು ವಾಪಸ್ ಬಂದಿರಲಿಲ್ಲ. ನಿನ್ನೆ ಬೆಂಗಳೂರು ಪೊಲೀಸರು ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವ ಮಾಹಿತಿಯನ್ನು ಕುಟುಂಬಸ್ಥರಿಗೆ ನೀಡಲಾಗಿತ್ತು. 
ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಏನಿದೆ?

ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಶವವನ್ನು ಮೊದಲ ಬಾರಿ ನೋಡಿದ್ದು ಅನುಗ್ರಹ ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಸೆಕ್ಯುರಿಟಿ ಗಾರ್ಡ್ ಈ ಸಂಬಂಧ ದೂರು ದಾಖಲಿಸಿದ್ದರು. ಅಪಾರ್ಟ್ಮೆಂಟ್ ಮುಂಭಾಗ ಗಸ್ತು ಮಾಡುತ್ತಿದ್ದಾಗ ಪತ್ತೆಯಾಗಿತ್ತು. 35 ವರ್ಷ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಮುಖ ಹಾಗೂ ತಲೆಗೆ ಮತ್ತು ಕಿವಿಗೆ ರಕ್ತದ ಗಾಯ ಆಗಿರೋದು ಕಂಡು ಬಂದಿತ್ತು.

Leave a Reply

Your email address will not be published. Required fields are marked *

Optimized by Optimole
error: Content is protected !!