ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣ:ಆರೋಪಿ ಅತುಲ್ ರಾವ್ ಖುಲಾಸೆ
news.ashwasurya.in/Shivamogga
✍️ SUDHIR VIDHATA
ಅಶ್ವಸೂರ್ಯ/ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್ ರಾವ್ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ.
ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್ ರಾವ್ ವಿರುದ್ಧ ದೂರು ದಾಖಲಾಗಿತ್ತು.
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತಮ್ಮ ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ಈ ವಿಚಾರದಲ್ಲಿ ಭಟ್ ಬಾಲ್ಯ ಸ್ನೇಹಿತ, ಅತುಲ್ ರಾವ್ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ 2008ರ ಜೂ. 19ರಂದು ಮಣಿಪಾಲ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷ ಆರೋಪವನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯ 2023ರ ನ.10ರಂದು ಆರೋಪಿ ಅತುಲ್‌ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು.
ಪ್ರಕರಣದ ಹಿನ್ನಲೆ..
ಅತುಲ್ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು. ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿ ಅತುಲ್ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದ್ದಾರೆ.
ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪದ್ಮಪ್ರಿಯ ಪತ್ತೆಯಾಗಿದ್ದರು. 2008ರ ಜೂನ್ 10 ರಂದು ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ ಆರೋಪದಡಿ ದೂರು ದಾಖಲಾಗಿತ್ತು. ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ರಾವ್ ಅನುಕೂಲ ಮಾಡಿಕೊಟ್ಟಿದ್ದ.!ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ್ ಠಾಣಾ ಪೊಲೀಸ್ ಹಾಗೂ ಸಿಒಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.
2009ರಲ್ಲಿ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಅಂದು ಶಾಸಕರಾಗಿದ್ದ ರಘುಪತಿ ಭಟ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಪದ್ಮಪ್ರಿಯ ಅಪಹರಣವಾಗಿದೆ ಎಂಬಂತೆ ಬಿಂಬಿಸಿ ಆಕೆಯನ್ನು ಅತುಲ್ ದೆಹಲಿಗೆ ಕರೆದೊಯ್ದಿದ್ದ. ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ನಕಲಿ ದಾಖಲೆ ಸೃಷ್ಟಿಸಿದ್ದ. ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪದ್ಮಪ್ರಿಯ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ
ಉಡುಪಿ ಸಿಜೆಎಂ ನ್ಯಾಯಾಲಯ 2023ರ ನ.10ರಂದು ಆರೋಪಿ ಅತುಲ್‌ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು.ಆರೋಪಿ
ಅತುಲ್ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು. ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿ ಅತುಲ್ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದ್ದಾರೆ.