ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತನಿಖೆ ಅಂತಿಮ ಹಂತದಲ್ಲಿರುವಾಗ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ವರ್ಗಾವಣೆ.!!

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತನಿಖೆ ಅಂತಿಮ ಹಂತದಲ್ಲಿರುವಾಗ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ವರ್ಗಾವಣೆ

news.ashwasurya.in/Shivamogga

✍️ SUDHIR VIDHATA

ಅಶ್ವಸೂರ್ಯ/ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಚಿತ್ರದುರ್ಗಾದ ಯುವಕ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯಾಗಿ ನಟ ದರ್ಶನ್‌ ಅವರು ಪೊಲೀಸ್‌ ಕಸ್ಟಡಿಯಲ್ಲಿದ್ದು, ಇದೀಗ ಈ ಪ್ರಕರಣದ ತನಿಖಾಧಿಕಾರಿಯಾದ ಗಿರೀಶ್ ನಾಯಕ್ ಅವರನ್ನು ದಿಢೀರ್‌ ವರ್ಗಾವಣೆ ಮಾಡಲಾಗಿದೆ.!!.

ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದು, ಇದೀಗ ಈ ಪ್ರಕರಣದ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಅವರಿಗೆ ವಹಿಸಲಾಗಿದೆ.

ಹತ್ಯೆಯಾದ ರೇಣುಕಾಸ್ವಾಮಿ

ಇನ್ನೂ ಗಿರೀಶ್‌ ಅವರನ್ನು ಚುನಾವಣೆ ನಿಮಿತ್ತ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಿಂದ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಅದರಂತೆ ಅವರನ್ನು ಇದೀಗ ವಾಪಾಸ್‌ ಅಲ್ಲಿಗೆ ವರ್ಗಾಯಿಸಲಾಗಿದೆ. ಇದು ದಿಢೀರ್‌ ವರ್ಗಾವಣೆಯಲ್ಲ,ಚುನಾವಣೆ ನಿಮಿತ್ತ ಇಲ್ಲಿಗೆ ಬಂದಿದ್ದರು ಮರಳಿ ಅವರ ಠಾಣೆಗೆ ಹೋಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದ ತನಿಖಾ ಅಧಿಕಾರಿ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅವರನ್ನು ಈ ಪ್ರಕರಣದ ತನಿಖೆ ಅಂತಿಮ  ಹಂತದಲ್ಲಿರುವಾಗ ಗಿರೀಶ್‌ ಅವರನ್ನು ಇನ್‌ಸ್ಪೆಕ್ಟರ್‌ ಹುದ್ದೆಯಲ್ಲೇ ಮುಂದುವರೆಸುವ ಅವಕಾಶಗಳಿತ್ತು ಆದರೆ ಈ ರೀತಿಯ ಕ್ರಮ ಕೈಗೊಂಡಿದ್ದಾದರು ಯಾಕೆ.? ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯನ್ನು ಗುರುವಾರ ಬದಲಾಯಿಸಲಾಗಿದೆ ಎಂದು ವರದಿಯಾಗಿದೆ. ಕನ್ನಡ ಸಿನಿ ತಾರೆ ದರ್ಶನ್ ತೂಗುದೀಪ ಅವರನ್ನು ಹಲವು ಸಹಾಯಕರೊಂದಿಗೆ ಬಂಧಿಸಿ ಆರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ವೀರಶೈವ-ಲಿಂಗಾಯತ ಸಮುದಾಯದಿಂದ ನ್ಯಾಯಕ್ಕಾಗಿ ಬೇಡಿಕೆಯೊಂದಿಗೆ ಚಿತ್ರದುರ್ಗ ನಿವಾಸಿ 33 ವರ್ಷದ ವ್ಯಕ್ತಿಯ ಹತ್ಯೆಯು ನಂತರದ ದಿನಗಳಲ್ಲಿ ರಾಜಕೀಯ ಛಾಯೆಯನ್ನು ಪಡೆದುಕೊಂಡಿದೆ.

ವರದಿಗಳ ಪ್ರಕಾರ, ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅವರನ್ನು ಗುರುವಾರ ವರ್ಗಾವಣೆ ಮಾಡಲಾಗಿದೆ. ಅವರ ಮೇಲಧಿಕಾರಿ – ಸಹಾಯಕ ಪೊಲೀಸ್ ಆಯುಕ್ತ ಚಂದನ್ ಗೌಡ – ತನಿಖಾ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 

ನಾಯಕ್ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಠಾಣೆಗೆ ನಿಯೋಜಿಸಲಾಗಿತ್ತು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅವರನ್ನು ಮೂಲ ಠಾಣೆಗೆ ಹಿಂತಿರುಗಿಸಲಾಗಿದೆ. ಮುಂದುವರಿಕೆಗಾಗಿ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿದ್ದ ಎಸಿಪಿ ಗೌಡ ಅವರನ್ನು ಈಗ ಐಒ ಆಗಿ ನೇಮಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!