ನಟ ದರ್ಶನ್ ಗೆ ಎದುರಾಗುತ್ತಾ ಮತ್ತೊಂದು ಸಂಕಷ್ಟ.!?

ನಟ ದರ್ಶನ್ ಗೆ ಎದುರಾಗುತ್ತಾ ಮತ್ತೊಂದು ಸಂಕಷ್ಟ.!?

ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರಿನ ಹೊರವಲಯದಲ್ಲಿರುವ ನಟ ದರ್ಶನ್ ಅವರಿಗೆ ಸೇರಿದ್ದು ಎನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್‌ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಮೃತ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ ಎಂದು ತಿಳಿದುಬಂದಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದನು. ಆತ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು.

ಇನ್ನು ಶ್ರೀಧರ್ ಮೃತ ದೇಹವನ್ನು ನೋಡಿದ್ದ ಆತನ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದನು.
ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃತಪಟ್ಟಿದ್ದನು. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಶ್ರೀಧರ್, ಫಾರ್ಮ್‌ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಅನಾಥ ಶವವಾಗಿ ಪತ್ತೆಯಾಗಿದ್ದ. ಸುಮಾರು 2 ಎಕರೆ 36ಗುಂಟೆ ಪ್ರದೇಶದಲ್ಲಿರುವ ಜಾಗದಲ್ಲಿ ಫಾರ್ಮ್ ಹೌಸ್ ನಿರ್ಮಾಣವಾಗುತ್ತಿದೆ. ನನ್ನ ಸಾವಿಗೆ ನಾನೇ ಕಾರಣ, ಒಂಟಿತನ ಕಾಡುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ಸ್ಯೂಸೈಡ್ ಮಾಡಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲಿ ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ದಾಖಲು ಮಾಡಿಕೊಂಡಿದ್ದಾರೆ

ಸುಮಾರು 10 ಎಕರೆ ಪ್ರದೇಶದಲ್ಲಿದ್ದ ಫಾರ್ಮ್ ಹೌಸ್‌ನಲ್ಲಿ ಸುಮಾರು 1 ವರ್ಷ ಕಾಲ ಶ್ರೀಧರ್‌ ಮ್ಯಾನೇಜರ್‌ ಆಗಿ ಕೆಲಸ ಮಾಡಿದ್ದರು. ವಿಷ ಸೇವಿಸಿದ ಪರಿಣಾಮ ಫಾರ್ಮ್ ಹೌಸ್ ಪಕ್ಕದಲ್ಲಿರುವ ಬಂಡೆಯ ಮೇಲೆ ರಕ್ತಕಾರಿ ಶ್ರೀಧರ್ ಸಾವನ್ನಪ್ಪಿದ್ದರು. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಡೆತ್‌ನೋಟ್‌ನಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದಿದ್ದರು. ಅಷ್ಟೇ ಅಲ್ಲದೇ ವಿಡಿಯೋದಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ.!

ಆತ್ಮಹತ್ಯೆ ಪತ್ರದಲ್ಲಿ ಏನಿತ್ತು?

ಪೊಲೀಸ್ ಸರ್ ನನ್ನ ಸಾವಿಗೆ ನಾನೇ ಕಾರಣ ನನ್ನ ಸಾವಿನ ಬಗ್ಗೆ ಯಾರೂ ಕಾರಣ ಅಲ್ಲ.. ನನ್ನ ಸಾವಿಗೆ ನಾನೇ ಕಾರಣ
ನನ್ನ ಒಂಟಿತನ ನನಗೆ ತುಂಬಾ ಜಾಸ್ತಿ ಕಾಡುತ್ತಾ ಇತ್ತು. ಎಷ್ಟೇ ಪ್ರಯತ್ನ ಪಟ್ಟರೂ ನನ್ನಿಂದ ಆಗಲಿಲ್ಲ.ಅದಕ್ಕೆಚೆನ್ನಾಗಿ ಯೋಚನೆ ಮಾಡಿ ನನ್ನ ಸಾವಿನ ನಿರ್ಧಾರ ನಾನೇ ಮಾಡಿ ಸಾಯುತ್ತಾ ಇದ್ದೇನೆ.
ನನ್ನ ಅಮ್ಮ, ಅಪ್ಪ, ಅಕ್ಕಂದಿರು ಮತ್ತು ನನ್ನ ಫ್ರೆಂಡ್ಸ್ ಯಾರಾದ್ರೂ ನನ್ನ ಸಾವಿನ ಬಗ್ಗೆ ಅನುಮಾನ ಇದೆ ಅಂತಾ ಹೇಳಿ ದೂರು ಕೊಟ್ಟರೆ ಅದನ್ನು ತಗೊಬೇಡಿ ಸರ್.
ಯಾಕಂದ್ರೆ ನನ್ನ ಸಾವು ನನ್ನ ನಿರ್ಧಾರ. ನಾನು ಚೆನ್ನಾಗಿ ಯೋಚನೆ ಮಾಡಿ, ನನ್ನ ನಾನೇ ಕಳೆದು ಕೊಳ್ತಾ ಇದ್ದೇನೆ. ದಯವಿಟ್ಟು ನನ್ನ ಬಗ್ಗೆ ಯಾರೂ ಕೆಟ್ಟದಾಗಿ ತಿಳ್ಕೊಬೇಡಿ. ಪೊಲೀಸ್ ಸರ್ ನನ್ನ ಸಾವಿಗೆ ನಾನೇ ಕಾರಣ. ದಯವಿಟ್ಟು ಸರ್ ಯಾರಿಗೂ ತೊಂದರೆ ಕೊಡಬೇಡಿ.
ಪ್ಲೀಸ್ ಸರ್. ನನ್ನ ಸಾವಿಗೆ ನಾನೇ ಕಾರಣ ಬದುಕಿದ್ದು ಮನೆ ಕಟ್ಟಬೇಕು ಅಂತಾ ತುಂಬಾ ಆಸೆ ಇತ್ತು. ಆಗ್ತಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದ್ರು ಕಟ್ಟಿ ಖುಷಿಯಾಗಿ ಇರಿ.. ಎಂದು ಬರೆದಿದ್ದಾನೆ.

Leave a Reply

Your email address will not be published. Required fields are marked *

Optimized by Optimole
error: Content is protected !!