ರೈಲ್ವೆ ಕಾಮಗಾರಿಗೆ ಸಂಬಂಧಿಸಿದಂತೆ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನೆಡೆಸಿದ ಸಂಸದ ಬಿ ವೈ ರಾಘವೇಂದ್ರ
ಅಶ್ವಸೂರ್ಯಶಿವಮೊಗ್ಗ : ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ರೈಲ್ವೇ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಸಂಬಂಧಿಸಿದಂತೆ ರೈಲ್ವೇ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ಯೋಜನೆಗೆ ಹೊಂದಿಕೊಂಡಿರುವ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಲಾಯಿತು.
ಈ ಕೆಳಕಂಡ ಕಾಮಗಾರಿಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಸಲಾಯಿತು.
ಮೊದಲನೆಯದಾಗಿ ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೆ ಮಾರ್ಗದ ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಸಾಗಿರುವ ಕುರಿತು ಸಂಸದರು ಮಾಹಿತಿ ಕಲೆಹಾಕಿದರು.
ಇನ್ನೂ ಭದ್ರಾವತಿ ಸೇರಿದಂತೆ ಹೊಸದಾಗಿ ಅನುಮೋದನೆ ದೊರಕಿರುವ ರೈಲ್ವೇ ಮೇಲ್ ಸೇತುವೆ ಮತ್ತು ರೈಲ್ವೇ ಕೆಳಸೇತುವೆ ಕಾಮಗಾರಿ ಸಾಗಿರುವ ಹಂತದ ಕುರಿತು ಮಾಹಿತಿ ಪಡೆದರು.
ಮತ್ತು ಬೀರೂರು – ಶಿವಮೊಗ್ಗ ರೈಲ್ವೆ ಡಂಬಲಿಂಗ್ ಯೋಜನೆ ಶೀಘ್ರವಾಗಿ ಪ್ರಾರಂಭಿಸುವ ಕುರಿತು ಚರ್ಚೆ ನಡೆಸಲಾಯಿತು.
ಹಾಗೂ ಕೋಟೆ ಗಂಗೂರಿನಲ್ಲಿ ನಡೆಯುತ್ತಿರುವ ಕೋಚಿಂಗ್ ಡಿಪೋ ಕಾಮಗಾರಿ ಸಾಗಿರುವ ಹಂತದ ಕುರಿತು ಮಾಹಿತಿ ಪಡೆದು “ಒಂದೇ ಭಾರತ್” ರೈಲಿಗೆ ಅನುಕೂಲವಾಗುವಂತೆ ಯೋಜನೆ ಸಿದ್ಧಪಡಿಸುವಂತೆ ಸಂಸದರು ಸೂಚನೆ ನೀಡಿದರು.
ಈ ಎಲ್ಲಾ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಬೇಕಾಗಿರುವ ಅಗತ್ಯ ಅನುದಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಹಾಗೂ ಭವಿಷ್ಯದ ಅನೇಕ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಸೂಕ್ತ ಸಮಯದಲ್ಲಿ ಸೂಕ್ತ ಅನುದಾನ ಬಿಡುಗಡೆ ಮಾಡಿಸಲು ರೈಲ್ವೇ ಸಚಿವರ ಮನವೊಲಿಸುತ್ತೇನೆ ಎಂದು ಭರವಸೆ ನೀಡಿ, ಅಧಿಕಾರಿಗಳಿಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಲಾಯಿತು.