ರಾಜ್ಯ ಕಂಡ ಶ್ರೇಷ್ಠ ಹಿರಿಯ ಲೇಖಕಿ ಕಮಲಾ ಹಂಪನಾ ಇನ್ನಿಲ್ಲ
ಅಶ್ವಸೂರ್ಯ/ಶಿವಮೊಗ್ಗ: ಹಿರಿಯ ಲೇಖಕಿ ಕಮಲಾ ಹಂಪನಾ ಅವರು ಬೆಂಗಳೂರಿನ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ವಿಮರ್ಶೆ, ಸಂಶೋಧನೆಗಳಲ್ಲಿ ಹೆಸರಾಗಿದ್ದ ಕಮಲಾ ಹಂಪನಾ, ಮೂಡುಬಿದಿರೆಯಲ್ಲಿ ನಡೆದಿದ್ದ 71ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿದ್ದರು.
ಹಿರಿಯ ಲೇಖಕಿ ಕಮಲಾ ಹಂಪನಾ(89) ನಿದ್ರೆಗೆ ಜಾರಿದಾಗಲೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ(ಶುಕ್ರವಾರ) ರಾತ್ರಿ ಊಟ ಮಾಡಿಮಲಗಿದ ಅವರು ನಿದ್ದೆಯಲ್ಲೇ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಮಲಾ ಹಂಪನಾ ಅವರು ಬೆಂಗಳೂರಿನ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ವಿಮರ್ಶೆ, ಸಂಶೋಧನೆಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ಅವರು ಮೂಡುಬಿದಿರೆಯಲ್ಲಿ ನಡೆದಿದ್ದ 71ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿದ್ದರು.
ಕಮಲಾ ಹಂಪನಾ ಅವರ ಪತಿ ಹಿರಿಯ ಲೇಖಕ ಹಂ.ಪ. ನಾಗರಾಜಯ್ಯ. ರಾಜಾಜಿನಗರದ ಮನೆಯಲ್ಲೇ ಕಮಲಾ ಹಂಪನಾ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಮಲಾ ಹಂಪನಾ ಅವರ ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ರಾಮಯ್ಯ ಮೆಡಿಕಲ್ ಕಾಲೇಜಿಗೆ ಕಮಲಾ ಹಂಪನಾ ಅವರ ದೇಹವನ್ನು ದಾನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಹೆಸರಾಂತ ಹಿರಿಯ ಲೇಖಕಿಗಳ ಸಾಲಿನಲ್ಲಿ ಮೊದಲಿಗರಾಗಿದ್ದ ಕಮಲಾ ಹಂಪನಾ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.