ಭಾರತೀಯ ಮೂಲದ ಮನೆ ಕೆಲಸದವರ ಮೇಲೆ ದೌರ್ಜನ್ಯ ಹೆಸರಾಂತ ಉದ್ಯಮಿ ಹಿಂದುಜಾ ಕುಟುಂಬಸ್ಥರಿಗೆ 4.5 ವರ್ಷ ಜೈಲು ಶಿಕ್ಷೆ.

ಭಾರತೀಯ ಮೂಲದ ಮನೆ ಕೆಲಸದವರ ಮೇಲೆ ದೌರ್ಜನ್ಯ –ಹೆಸರಾಂತ ಉದ್ಯಮಿ ಹಿಂದುಜಾ ಕುಟುಂಬಸ್ಥರಿಗೆ 4.5 ವರ್ಷ ಜೈಲು ಶಿಕ್ಷೆ.

ಜಿನೀವಾ :‌ ವಿಶ್ವದ ಶ್ರೀಮಂತ ಕುಟುಂಬಗಳಲ್ಲಿ ಒಂದಾದ ಭಾರತ ಮೂಲದ ಉದ್ಯಮಿ ಪ್ರಕಾಶ್‌ ಹಿಂದುಜಾ ಸೇರಿದಂತೆ ಅವರ ಕುಟುಂಬದ ನಾಲ್ವರಿಗೆ ಸ್ವಿಟ್ಜರ್‌ಲ್ಯಾಂಡ್‌ ನ್ಯಾಯಾಲಯವು ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮನೆಯಲ್ಲಿ ತಾವು ಸಾಕಿದ ನಾಯಿಗಳಿಗೆ ಖರ್ಚುಮಾಡುವ ಹಣಕ್ಕಿಂತ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಡಿಮೆ ಸಂಬಳ ನೀಡಿರುವುದು, ಅಗತ್ಯಕ್ಕಿಂತ ಹೆಚ್ಚು ದುಡಿಸಿಕೊಂಡು ಆಕೆಯ ಮೇಲೆ ಹಲವು ರೀತಿಯಲ್ಲಿ ದೌರ್ಜನ್ಯ ಎಸಗಿದ ಹಿನ್ನಲೆಯಲ್ಲಿ ಕುಟುಂಬದ ನಾಲ್ವರಿಗೂ ನ್ಯಾಯಾಲಯವು ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹಿಂದುಜಾ ಕುಟುಂಬದ ಉದ್ಯಮಿ ಪ್ರಕಾಶ್‌ ಹಿಂದುಜಾ, ಅವರ ಪತ್ನಿ ಕಮಲ್ ಹಿಂದುಜಾ ಮಗ ಅಜಯ್ ಹಿಂದುಜಾ ಹಾಗೂ ಸೊಸೆ ನಮ್ರತಾ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ ಆದೇಶ ಹೊರಡಿಸಿದೆ.ಈ ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದ, ಹಿಂದುಜಾ ಕುಟುಂಬದ ಮ್ಯಾನೇಜರ್‌ ನಜೀಬ್‌ ಜಿಯಾಜಿಗೆ 18 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ.

ಸ್ವಿಟ್ಜರ್‌ಲ್ಯಾಂಡ್‌ನ ಕಾರ್ಮಿಕ ಕಾನೂನು ಉಲ್ಲಂಘನೆ, ಮಾನವ ಕಳ್ಳಸಾಗಣೆ, ಮನೆಗೆಲಸದವರ ಮೇಲೆ ದೌರ್ಜನ್ಯ ಸೇರಿ ಹಲವು ಪ್ರಕರಣಗಳಲ್ಲಿ ನಾಲ್ವರನ್ನೂ ದೋಷಿಗಳು ಎಂದು ಕೋರ್ಟ್‌ ತೀರ್ಪು ನೀಡಿ ಶಿಕ್ಷೆ ವಿಧಿಸಿದೆ. ಹಿಂದುಜಾ ಕುಟುಂಬವು ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿರುವ ತಮ್ಮ ಮನೆಗೆ ಕೆಲಸ ಮಾಡಲು ಭಾರತೀಯ ಮಹಿಳೆಯೊಬ್ಬರನ್ನು ಕರೆದುಕೊಂಡು ಹೋಗಿದ್ದರು ಈ ಕೆಲಸದಾಕೆಗೆ ವಾರದಲ್ಲಿ ಏಳು ದಿನಗಳ ಕಾಲ ಹಾಗೂ ಪ್ರತಿದಿನ 18 ಗಂಟೆಕಾಲ ಕೆಲಸ ಮಾಡಿಸಿಕೊಳ್ಳವುದಲ್ಲದೆ ಕೇವಲ ಏಳು ಸ್ವಿಸ್, ಅಂದರೆ ದಿನಕ್ಕೆ 650 ರೂ. ಸಂಬಳ ನೀಡಿದ್ದಾರೆ.!

ಜಿನೀವಾ: ಭಾರತದಿಂದ ಮನೆ ಕೆಲಸಕ್ಕೆಂದು ಕರೆದುಕೊಂಡು ಹೋದ ಕಾರ್ಮಿಕರನ್ನು ಶೋಷಣೆ ಮಾಡಿದ ಆರೋಪ ಸಾಬೀತಾದ ಕಾರಣ ಬ್ರಿಟನ್​​ನ ಶ್ರೀಮಂತ ಉದ್ಯಮಿ ಹಿಂದೂಜಾ ಕುಟುಂಬದ ನಾಲ್ವರಿಗೆ ಸ್ವಿಸ್ ನ್ಯಾಯಾಲಯ 4.5 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಕುಟುಂಬದ ಪ್ರಕಾಶ್ ಹಿಂದೂಜಾ, (78), ಅವರ ಪತ್ನಿ ಕಮಲ್ (75) ಇವರಿಗೆ ತಲಾ ನಾಲ್ಕು ವರ್ಷ ಮತ್ತು ಐದು ತಿಂಗಳ ಶಿಕ್ಷೆ ಪ್ರಕಟಿಸಲಾಗಿದೆ. ಅವರ ಮಗ ಅಜಯ್ ಮತ್ತು ಅವರ ಪತ್ನಿ ನಮ್ರತಾಗೆ ತಲಾ ನಾಲ್ಕು ವರ್ಷಗಳ ಅವಧಿಯ ಶಿಕ್ಷೆ ವಿಧಿಸಲಾಗಿದೆ ಹಾಗೂ ಕುಟುಂಬದ ಮ್ಯಾನೇಜರ್ ನಜೀಬ್ ಜಿಯಾಜಿಗೆ 18 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆಯಂತೆ.

ಆದರೆ ಅವರು ಮನೆಯಲ್ಲಿ ಸಾಕಿದ ನಾಯಿಗೆ ಮಾತ್ರ ವಾರ್ಷಿಕವಾಗಿ 8,584 ಸ್ವಿಸ್ (ಸುಮಾರು 8 ಲಕ್ಷ ರೂ.) ಖರ್ಚು ಮಾಡುತ್ತಾರಂತೆ.! ಹಾಗಾಗಿ ಹಿಂದುಜಾ ಕುಟುಂಬದವರು ತಮ್ಮ ಸೇವಕರಿಗಿಂತ ಸಾಕು ನಾಯಿಗಳಿಗೆ ಹೆಚ್ಚು ಖರ್ಚು ಮಾಡುತ್ತಾರೆ ಎಂದು ಮಹಿಳೆಯು ಕೋರ್ಟ್‌ ಮೊರೆ ಹೋಗಿದ್ದರು. ಅಷ್ಟೇ ಅಲ್ಲದೇ ಹಿಂದುಜಾ ಕುಟುಂಬದವರು ಮನೆ ಕೆಲಸದ ಮಹಿಳೆಯ ಪಾಸ್‌ಪೋರ್ಟ್ ಕಿತ್ತುಕೊಂಡು ಅನುಮತಿಯಿಲ್ಲದೇ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಿದ್ದರಂತೆ.! ಕೆಲಸದವರಿಗೆ ರಜೆ ಕೂಡ ನೀಡುತ್ತಿರಲಿಲ್ಲವಂತೆ ಅಲ್ಲದೇ ಕರೆನ್ಸಿಯಲ್ಲಿ ಸಂಬಳ ನೀಡುತ್ತಿದ್ದ ಕಾರಣ ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಖರ್ಚು ಮಾಡಲು ಹಣವಿರುತ್ತಿರಲಿಲ್ಲ ಎಂದು ವಕೀಲರು ವಾದ ಮಂಡಿಸಿದ್ದರು. ಈಗ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪುನಿಡಿದೆ.

ಹಿಂದೂಜಾ ಕುಟುಂಬದ ಮೇಲೆ ಏನೆಲ್ಲ ಆರೋಪ?

ಭಾರತದಿಂದ ಮನೆ ಕೆಲಸಕ್ಕೆಂದು ಜಿನೀವಾಗೆ ಕರೆದುಕೊಂಡು ಹೋದ ಮಹಿಳೆಯೊಬ್ಬರ ಪಾಸ್‌ಪೋರ್ಟ್‌ ಅನ್ನು ಹಿಂದೂಜಾ ಕುಟುಂಬದವರು ಮುಟ್ಟುಗೋಲು ಹಾಕಿಕೊಂಡಿದ್ದರು. ಅಷ್ಟೇ ಅಲ್ಲದೆ, ಆ ಕಾರ್ಮಿಕರ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದರು. ಜತೆಗೆ ಸಿಬ್ಬಂದಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದರು ಎಂಬ ಆರೋಪಗಳ ಅಡಿ ದೂರು ದಾಖಲಾಗಿತ್ತು. ಆರೋಪಗಳು ಸಾಬೀತಾಗಿದ್ದು, ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!