ಡ್ರಗ್ಸ್ ಕೇಸ್: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್, ಎಫ್‌ಐಆರ್ ರದ್ದು.
ಅಶ್ವಸೂರ್ಯ/ಬೆಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್ ಗಳ ಬಂಧನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಎಫ್‌ಐಆರ್ ರದ್ದುಗೊಳಿಸಿ ಆದೇಶಿಸಿದೆ.
ಮಾದಕ ಜಾಲದ ಡ್ರಗ್ಸ್ ಪೆಡ್ಲರ್ ಜೋತೆಗೆ ಸ್ಯಾಂಡಲ್‌ವುಡ್ ನ ಕೇಲವು ನಟ ನಟಿಯರ ನಂಟಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ ಬಂಧಿಸಿ ಎಫ್ಐಆರ್ ದಾಖಲಿಸಿದ್ದರು