ಹಾವೇರಿ : ಚಿಂಚೊಳ್ಳಿ ಮಾಯಮ್ಮನ ದರ್ಶನಕ್ಕೆ ಹೊದ ಭದ್ರಾವತಿಯ ಹದಿಮೂರು ಮಂದಿ ರಸ್ತೆ ಅಪಘಾತದಲ್ಲಿ ಶಿವನಪಾದ ಸೇರಿದಾರೆ..!!
ಅಶ್ವಸೂರ್ಯ/ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಭದ್ರಾವತಿಯ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಹತ್ತಿರ ನಡೆದಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಗಘಟನೆ ನಡೆದಿದೆ. ಮೃತರನ್ನು ಭದ್ರಾವತಿ ಮೂಲದ ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್ (40), ನಾಗೇಶ್ (18) ಯಲ್ಲಪ್ಪ (65), ಗಣೇಶಪ್ಪ (65), ರಂಗನಾಥ ಸ್ವಾಮಿ (62) ಮತ್ತು ಇವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು, ಚಾಲಕ ನಾಗೇಶ್ (23), ಶರಣಪ್ಪ (24), ಪರಶುರಾ (40), ಮಂಜುಳಾ ರಾಮಕೃಷ್ಣ (50) ಎಂದು ಗುರುತಿಸಲಾಗಿದೆ.
ಮೃತರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎನ್ನಲಾಗಿದೆ. ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂಡು ಮರಳಿ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಅಪಘಾತ ನೆಡೆದಿದೆ.!
ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ ಟಿಟಿ ವಾಹನ ಛಿದ್ರವಾಗಿದ್ದು ವಾಹನದಲ್ಲಿದ್ದ ಹದಿಮೂರು ಮಂದಿಯ ದೇಹಗಳು ಅಪ್ಪಚ್ಚಿಯಾಗಿವೆ.ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಹಾವೇರಿಯ ಅಗ್ನಿಶಾಮಕ ದಳದ ಸಿಬ್ಬಂದಿ ವಾಹನದಲ್ಲಿ ಅಪ್ಪಚ್ಚಿಯಾಗಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇನ್ನೂ ಈ ಅಪಘಾತದಲ್ಲಿ ಆಸ್ಪತ್ರೆಯಲ್ಲಿರುವ ಗಾಯಾಳು ಅರ್ಪಿತಾ(18 ) ಸೇರಿದಂತೆ ಮತ್ತೋರ್ವ ಚಿಕಿತ್ಸೆ ನಿಡುತ್ತಿದ್ದಾರೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದು ಬ್ಯಾಡಗಿ ಠಾಣೆಯ ಪೊಲೀಸರು ಸ್ಥಲಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಅಲ್ಲದೇ ಪೊಲೀಸರು ಮೃತರ ಬಗ್ಗೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.