ಕಳೆದ ಎರಡು ತಿಂಗಳಿನಿಂದ “ಗೃಹಲಕ್ಷ್ಮಿ” ಹಣ ಖಾತೆಗೆ ಬಂದಿಲ್ಲ ; ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಮಹಿಳೆಯರ ಆಕ್ರೋಶ.!

ಕಳೆದ ಎರಡು ತಿಂಗಳಿನಿಂದ ‘ಗೃಹಲಕ್ಷ್ಮಿ’ಹಣ ಖಾತೆಗೆ ಬಂದಿಲ್ಲ ; ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಮಹಿಳೆಯರ ಆಕ್ರೋಶ.!

ಅಶ್ವಸೂರ್ಯ/ಬೆಂಗಳೂರು : ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಫಲಾನುಭವಿ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ ಇದನ್ನು ನಂಬಿ ಹಣ ಬಾರದೇ ಸಾಕಷ್ಟು ತೊಂದರೆಯಾಗಿದೆ. ಸರ್ಕಾರದ ಯಾವ ಗ್ಯಾರಂಟಿಗಳು ಸರಿಯಾಗಿ ಇಲ್ಲ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಎರಡು ತಿಂಗಳಿಂದ ಹಣ ಬಂದಿಲ್ಲ. ಕೇಲವರಿಗಂತು ಬಂದೆ ಇಲ್ಲ, ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ.! ಆದರೆ ನಮಗೆ 2 ತಿಂಗಳಿನಿಂದ ಹಣ ಬರ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!