ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೆದ್ದಾರಿ ಅಭಿವೃದ್ಧಿ ಹಿನ್ನಲೆ ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಿದ ಸಂಸ ಬಿ ವೈ ರಾಘವೇಂದ್ರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ
ಅಶ್ವ ಸೂರ್ಯ/ಶಿವಮೊಗ್ಗ: ಸಂಸದರಾಗಿ ನಾಲ್ಕನೇ ಬಾರಿಗೆ ಅಧಿಕಾರ ಪಡೆಯುತ್ತಿದ್ದಂತೆ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ತಕ್ಷಣವೇ ಗಮನ ಹರಿಸಿರುವ ಅಭಿವೃದ್ಧಿಯ ಹರಿಕಾರ ಸಂಸದ ಬಿ ವೈ ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಜೈರಾಂ ಗಡ್ಕರಿಯವರನ್ನು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು.
ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಜೈರಾಂ ಗಡ್ಕರಿ
1) ಆಗುಂಬೆಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ.
2) ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗು ಭಾರಿ ಸೇತುವೆ ನಿರ್ಮಾಣ.
3) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ.
4) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ
5) ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ
ಸನ್ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂದಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿದರು.
ಕ್ಷೇತ್ರದ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ತಮ್ಮ ಬೆಂಬಲ ನೀಡುತ್ತಿರುವ ಮಾನ್ಯ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಜೈರಾಂ ಗಡ್ಕರಿಯವರಿಗೆ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದಗಳು.
“ಗಡ್ಕರಿ ಭೇಟಿ ಫಲಪ್ರಧ – ಹೊಸ ಯೋಜನೆಗಳಿಗೆ ಅನುಮೋದನೆ”:ಬಿ ವೈ ರಾಘವೇಂದ್ರ
ಶಿವಮೊಗ್ಗ: ಒಂದು ಜಿಲ್ಲೆಗೆ ಅಗತ್ಯ ಬಂಡವಾಳ ಹರಿದು ಬರಬೇಕು ಉದ್ಯೋಗ ಸೃಷ್ಟಿಯಾಗಬೇಕು ಈ ಮೂಲಕ ಜನರ ಜೀವನ ಮಟ್ಟ ಸುಧಾರಿಸಬೇಕು ಎಂದರೆ ರಾಷ್ಟ್ರೀಯ ಹೆದ್ದಾರಿಯ ರಸ್ತೆಗಳ ಸಂಪರ್ಕ ಬಹು ಮುಖ್ಯವಾಗಿದೆ. ಏಕೆಂದರೆ ಕಚ್ಚಾವಸ್ತುಗಳು ಸೇರಿದಂತೆ ಇನ್ನಿತರ ಅಗತ್ಯ ಪರಿಕರಗಳನ್ನು ಸರಿಯಾದ ಸಮಯಕ್ಕೆ ಸಾಗಿಸಲು ಉತ್ತಮ ರಸ್ತೆಗಳ ಅವಶ್ಯಕತೆ ಇರುತ್ತದೆ.
ನನ್ನ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ವಿವಿಧ ಆಯಾಮಗಳಲ್ಲಿ ಬಂಡವಾಳ ಹೂಡಿಕೆಗೆ ಈಗಾಗಲೇ ಸಾಕಷ್ಟು ಪ್ರಯತ್ನ ಆರಂಭಿಸಿದ್ದು ಅದರಲ್ಲಿ ಸ್ವಲ್ಪ ಮಟ್ಟಿನ ಯಶಸ್ಸು ದೊರಕಿದೆ. ಇದು ಇನ್ನಷ್ಟು ಯಶಸ್ಸಿನ ಪಥಕ್ಕೆ ಸಾಗಲು ಹೆದ್ದಾರಿಗಳು ಅಭಿವೃದ್ಧಿಯಾಗಬೇಕು. ಅದಕ್ಕೆ ಈಗಾಗಲೇ ಪೂರಕ ನೀಲಿನಕ್ಷೆ ಸಿದ್ಧವಾಗಿದೆ.
ಈ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳನ್ನು ಹಾಗೂ ಹೆದ್ದಾರಿಗಳನ್ನು ಉನ್ನತ ದರ್ಜೆಯ ರಸ್ತೆಗಳನ್ನಾಗಿ ಮೇಲ್ದರ್ಜೆಗೆರಿಸಬೇಕು ಎಂಬುದಕ್ಕೆ ಪ್ರಯತ್ನ ಆರಂಭಿಸಿದ್ದೇನೆ.
ಇದಕ್ಕೆ ಪುಷ್ಟಿ ಎಂಬಂತೆ ಮಾನ್ಯ ಕೇಂದ್ರ ಹೆದ್ದಾರಿ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಜೈರಾಮ್ ಗಡ್ಕರಿ ಅವರು ಅಗತ್ಯ ಸ್ಪಂದನೆ, ನಿಯಮಾನುಸಾರ ಅನುಮೋದನೆ ಮತ್ತು ಸೂಕ್ತ ಅನುದಾನ ನೀಡಿ ಅಭಿವೃದ್ಧಿಯ ನನ್ನ ಕನಸಿಗೆ ಬಲ ಕೊಡುತ್ತಿದ್ದಾರೆ.
ಇಂದು ಕೂಡ ಮಾನ್ಯ ಸಚಿವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಜಿಲ್ಲೆಯ ಹೆದ್ದಾರಿ ಹಾಗೂ ಸೇತುವೆ ಅಭಿವೃದ್ಧಿಗೆ ಅನುದಾನ ಕೋರಿ ಭೇಟಿ ಮಾಡಿದ ಸಂದರ್ಭದಲ್ಲಿ ನಿರೀಕ್ಷೆಗೂ ಮೀರಿ ಸ್ಪಂದಿಸಿ ಆಶ್ವಾಸನೆ ನೀಡಿದ್ದು, ಮತ್ತೊಮ್ಮೆ ಈ ಸೇವೆ ಮಾಡಲು ಅವಕಾಶ ಕಲ್ಪಿಸಿದ ಕ್ಷೇತ್ರದ ಮಹಾಜನತೆಗೆ ಹಾಗೂ ಸಚಿವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಅರ್ಪಿಸುತ್ತೇನೆ.
- ಬಿ ವೈ ರಾಘವೇಂದ್ರ