ಅಚ್ಚ ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ ಕ್ಯಾನ್ಸರ್ ಗೆ ಬಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿ ಕೆ ಶಿವಕುಮಾರ್, ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ! ಅಪರ್ಣಾರ ಧ್ವನಿಯ ಕೇಲವು ವಿಡಿಯೋ…

ಅಚ್ಚ ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ ಕ್ಯಾನ್ಸರ್ ಗೆ ಬಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿ ಕೆ ಶಿವಕುಮಾರ್, ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ!

ಅಪರ್ಣಾರ ಧ್ವನಿಯ ಕೇಲವು ವಿಡಿಯೋ…

ಅಶ್ವಸೂರ್ಯ/ಶಿವಮೊಗ್ಗ : ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಪರ್ಣಾ ಅವರು ತಮ್ಮ ಶ್ರೇಷ್ಠ ನಟನೆಯಿಂದ ಹಿಂದಿರುಗಿ ನೋಡಿರಲಿಲ್ಲ. ನಟಿಯಾಗಿ, ನಿರೂಪಕಿಯಾಗಿ, ನಟ ಸೃಜನ್ ಲೋಕೇಶ್ ಅವರು ಕಿರುತೆರೆಯಲ್ಲಿ ನಿರ್ಮಾಣಮಾಡಿದ ಹೆಸರಾಂತ ಶೋ “ಮಜಾ ಟಾಕೀಸ್” ನಲ್ಲಿ ಪ್ರತಿ ಎಪಿಸೋಡ್ ನಲ್ಲೂ ಕಾಮಿಡಿ ನಟಿಯಾಗಿ ಅಭಿನಯಿಸಿ ಕನ್ನಡಿಗರ ಮನಗೆದ್ದಿದ್ದರು ಸಾಕಷ್ಟು ಕಿರುತೆರೆ ಧಾರಾವಾಹಿ ಗಳನ್ನು ಅಭಿನಯಿಸಿದ ಹಿರಿಮೆ ಅಪರ್ಣಾ ಅವರದು. ಬೆಳ್ಳಿತೆರೆ, ಕಿರುತೆರೆಯಲ್ಲಿ ತಮ್ಮ ಉತ್ತಮ ಅಭಿನಯದಿಂದಲೆ ಮಿಂಚಿದ್ದರು, ಖ್ಯಾತ ನಿರೂಪಕಿಯಾಗಿದ್ದ ಅಪರ್ಣಾ ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.

ಅಪರ್ಣಾ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗನೆ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ದೊರಕಲಿ…

— ಸಿದ್ಧರಾಮಯ್ಯ, ಮುಖ್ಯಮಂತ್ರಿಗಳು

ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಗಿದೆ. ಸರಳ ಕನ್ನಡದಲ್ಲಿ ಸುಲಲಿತವಾಗಿ ತುಂಬಾ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

— ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತಮ್ಮ ಅದ್ಭುತ ಮಾತುಗಾರಿಕೆಯಿಂದ ಹೆಸರು ಮಾಡಿದ್ದ ಖ್ಯಾತ ನಿರೂಪಕಿ,ಶ್ರೇಷ್ಠ ನಟಿ ಅಪರ್ಣಾ ಅವರ ಅಕಾಲಿಕ ನಿಧನ‌‌ ನಿಜಕ್ಕೂ ಬೇಸರ ತರಿಸಿದೆ. ಅಪರ್ಣಾ ಅವರಾಡುತ್ತಿದ್ದ ಶುದ್ಧ ಕನ್ನಡ ಭಾಷೆಯನ್ನು ಕೇಳುವುದೇ ಅನನ್ಯ ಅನುಭವ. ಅವರ ನಿಧನ ಯಾವತ್ತಿಗೂ ತುಂಬಲಾರದ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

— ಸಂತೋಷ್‌ ಲಾಡ್‌, ಸಚಿವರು

ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರು ಕನ್ನಡ ಚಿತ್ರರಂಗದ ಶ್ರೇಷ್ಠ ನಟಿ ಎನಿಸಿಕೊಂಡಿದ್ದರು.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ದೇವರು‌ ನೀಡಲಿ.

ಡಿ ಕೆ ಶಿವಕುಮಾರ್, ಉಪ ಮುಖ್ಯಮಂತ್ರಿಗಳು


ಬೆಳ್ಳಿತೆರೆ, ಕಿರುತೆರೆ ಅಲ್ಲದೆ ಸ್ಪಷ್ಟ ಕನ್ನಡದ ನಿರೂಪಕಿಯಾಗಿ ಕನ್ನಡಿಗರ ಮನ ಗೆದ್ದಿದ್ದ ಶ್ರೇಷ್ಠ ನಟಿ ಶ್ರೀಮತಿ ಅಪರ್ಣಾ ಅವರ ಅಗಲಿಕೆಯಿಂದ ಕೋಟ್ಯಂತರ ಕನ್ನಡಿಗರ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅಪರ್ಣಾ ಅವರ ನಿಧನವು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ನಿರೂಪಕಿಯಾಗಿ,ಶ್ರೇಷ್ಠ ನಟಿಯಾಗಿ ನಾಲ್ಕೈದು ದಶಕಗಳಿಂದ ದುಡಿದು ಕನ್ನಡನಾಡಿನ ಮನೆ ಮಾತಾಗಿದ್ದ ಅಪರ್ಣಾರ ಆತ್ಮಕ್ಕೆ ಚಿರಶಾಂತಿ ದೊರಕಲಿ.

 - ನ್ಯೂಸ್.ಅಶ್ವಸೂರ್ಯ.ಇನ್, ಬಳಗ

Leave a Reply

Your email address will not be published. Required fields are marked *

Optimized by Optimole
error: Content is protected !!