ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಅಧಿಕಾರಿ ಅತ್ಹರ್ ಆಲಿ ಮನೆಯಲ್ಲಿ ಸಿಗ್ತು ಲಕ್ಷಗಟ್ಟಲೆ ಹಣ ಮತ್ತು ಚಿನ್ನ.!! , ಚಿನ್ನವಿದ್ದ ಬ್ಯಾಗನ್ನು ಪಕ್ಕದ ಮನೆಗೆ ಎಸೆದ ಭ್ರಷ್ಟ ಅಧಿಕಾರಿ ಅತ್ಹರ್ ಆಲಿ.!
ಅಶ್ವಸೂರ್ಯ/ಶಿವಮೊಗ್ಗ: ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅತ್ಹರ್ ಆಲಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಿನ್ನೆ ( ಜುಲೈ, 19 ) ದಾಳಿಮಾಡಿದ್ದಾರೆ.ದಾಳಿಯ ಸಂಧರ್ಭದಲ್ಲಿ ಮನೆಯಲ್ಲಿ ಸಿಕ್ತು 2 ಕೆಜಿ ಚಿನ್ನ, 25 ಲಕ್ಷ ನಗದು, 2 ಡೈಮಂಡ್ ನೆಕ್ಲೆಸ್.!!
ಬೆಂಗಳೂರಿನ ಭ್ರಷ್ಟ ಅಧಿಕಾರಿಗಳಿಗೆ ನಿನ್ನೆ ಮುಂಜಾನೆಯೆ ಲೋಕಾಯುಕ್ತ ಅಧಿಕಾರಿಗಳ ತಂಡ ಬಿಸಿ ಮುಟ್ಟಿಸಿದ್ದಾರೆ. ತಮ್ಮ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗೆ ಬರುತ್ತಿದ್ದಂತೆ ಮನೆಯಲ್ಲೆ ಜಾಂಡ ಹೂಡಿದ್ದ ಅಧಿಕಾರಿ ಅತ್ಹರ್ ಆಲಿ ಕೂಡಲೇ ಚಿನ್ನ ಮತ್ತು ಹಣ ಇದ್ದ ಬ್ಯಾಗ್ ಒಂದನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರು ಕಾನೂನು ಮಾಪನ ಇಲಾಖೆಯಲ್ಲಿ ಡೆಪ್ಯುಟಿ ಕಂಟ್ರೋಲರ್ ಅಧಿಕಾರಿಯಾಗಿರುವ ಅತ್ಹರ್ ಆಲಿ ಎಂಬ ಹಣಬಾಕ ಅಧಿಕಾರಿಯ ಮನೆ ಮತ್ತು ಕಚೇರಿಯ ಮೇಲೆ ಜುಲೈ 19 ರ ಮುಂಜಾನೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದ್ದರು. ಮುಂಜಾನೆ 5:30 ರ ಹೊತ್ತಿಗೆ ಕಲ್ಯಾಣ ನಗರದಲ್ಲಿರುವ ಭ್ರಷ್ಟ ಅಧಿಕಾರಿ ಅತ್ಹರ್ ಆಲಿ ನಿವಾಸಕ್ಕೆ ತೆರಳಿದ ಲೋಕಾಯುಕ್ತ ಅಧಿಕಾರಿಗಳು ಸುಮಾರು 5 ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಯೊಂದನ್ನು ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಅತ್ಹರ್ ಆಲಿ ಮನೆಯಲ್ಲಿ ಹಣ, ಚಿನ್ನ ಪತ್ತೆಯಾಗಿದೆ. ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಅತ್ಹರ್ ಆಲಿ ಅವರು ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನವಿದ್ದ ಬ್ಯಾಗ್ ಎಸೆದಿದ್ದಾನೆ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಇವರ ಮೊದಲ ಅಂತಸ್ತು ಇತ್ತು. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್ಗೆ ತುಂಬಿ ಚಿನ್ನ ಎಸೆದಿದ್ದರು.
ಬ್ಯಾಗ್ ಎಸೆದಿದ್ದನ್ನ ನೋಡಿ ನೆರೆಮನೆ ನಿವಾಸಿ ಖುದ್ದು ಅಧಿಕಾರಿಗಳನ್ನ ಕರೆದಿದ್ದಾರೆ. ಕೂಡಲೇ ಹೋಗಿ ಪರಿಶೀಲನೆ ಮಾಡಿದಾಗ ಬ್ಯಾಗ್ನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ನಂತರ ಅಧಿಕಾರಿಗಳು ಬ್ಯಾಗ್ ವಶಕ್ಕೆ ಪಡೆದಿದ್ದಾರೆ.
ಒಂದು ಬ್ಯಾಗ್ ತುಂಬಾ ಚಿನ್ನದ ವಸ್ತುಗಳು ಸಿಕ್ಕಿವೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಅತ್ಹರ್ ಆಲಿಯ ಮನೆಯಲ್ಲಿ ಆತನಿಗೆ ಸಂಭಂಧಿಸಿದ ಇತರ ಸ್ಥಳಗಳಲ್ಲಿ ಅಧಿಕಾರಿಗಳ ತಂಡ ತನಿಖೆ ಮುಂದುವರಿಸಿದೆ.