ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಲವು ನಾಯಕರು ತೆರೆಮರೆಯಲ್ಲಿ ಪೈಪೋಟಿ ನಡೆಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದು ಎರಡು ತಿಂಗಳು ಕಳೆದರೂ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬೆಳವಣಿಗೆಯು ನಡೆದಿಲ್ಲ ಪಕ್ಷ ಸಂಘಟನೆ ಮತ್ತು ಇನ್ನೂಳಿದ ಚುನಾವಣೆಗಳಲ್ಲಿ ಬಿಜೆಪಿಯನ್ನು ಮಂಚೂಣಿಗೆ ತಂದು ನಿಲ್ಲಿಸುವ ಜವಬ್ದಾರಿ ಕರ್ನಾಟಕದ ಬಿಜೆಪಿ ನಾಯಕರ ಹೆಗಲ ಮೇಲಿದೆ. ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಒಂದೆರಡು ದಿನದ ಹಿಂದೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಸಾಕಷ್ಟು ಮಾತುಕತೆ ನಡೆಸಿದ್ದಾರೆ…
ಬಿವೈ ವಿಜಯೇಂದ್ರ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಮಗನ ದೆಹಲಿ ಬೇಟೆಯ ಕುರಿತು ಪ್ರತಿಕ್ರಿಯಿಸಿರುವ ಯಡಿಯೂರಪ್ಪ ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಗನ ಹತ್ತಿರ ರಾಷ್ಟ್ರೀಯ ನಾಯಕರು ಮಾಹಿತಿ ಪಡೆದಿದ್ದಾರೆ ಎಂದು ಹೇಳಿದ್ದಾರೆ….
ವಿಜಯೇಂದ್ರ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರು ಕರ್ನಾಟಕ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಸದ್ಯದ ಪರಿಸ್ಥಿತಿಯ ಬಗ್ಗೆ ವಿಜಯೇಂದ್ರ ಅವುರ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರಿಗೆ ಸಂಪೂರ್ಣವಾಗಿ ವಿವರಿಸಿದ್ದಾರೆ. ಅದರಲ್ಲಿ ವಿಶೇಷವೇನೂ ಇಲ್ಲಾ ಎಂದು ಯಡಿಯೂರಪ್ಪ ಮಗನ ಬೇಟಿ ಬಗ್ಗೆ ತಿಳಿಸಿದ್ದಾರೆ.
ಇದೇ ವೇಳೆ ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ವಿಜಯೇಂದ್ರ ಅವರು, ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದಷ್ಟೇ ಹೇಳಿದ್ದಾರೆ.
ನಾನು ಶಾಸಕನಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಲು ಹೋಗಿದ್ದೆ ಅಷ್ಟೇ ಅವರ ಆಶೀರ್ವಾದ ಪಡೆದುಕೊಂಡೆ ಹಿರಿಯರ ಆಶ್ರೀವಾದ ಪಡೆದುಕೊಂಡು ಬಂದಿದ್ದೇನೆ ಎಂದರು. ಶಾಸಕರಾಗಿ ಮತ್ತು ಪಕ್ಷದ ಉಪಾಧ್ಯಕ್ಷರಾಗಿ ಹೇಗೆ ಮುಂದುವರಿಯಬೇಕು ಎಂದು ಕೇಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಿದ್ದೇನೆ. ವಿರೋಧ ಪಕ್ಷದ ನಾಯಕ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನಾನು ಅವರ ಬಳಿ ಏನನ್ನೂ ಚರ್ಚಿಸಿಲ್ಲ’ ಅದು ವರಿಷ್ಠರ ಇಚ್ಚೇಗೆ ಬಿಟ್ಟಿದ್ದು ಎಂದು ವಿಜಯೇಂದ್ರ ಹೇಳಿದ್ದಾರೆ.
ವಿಜಯೇಂದ್ರ ಅವರ ದೆಹಲಿ ಬೇಟಿ ನಂತರ ಬಿಜೆಪಿ ವಲಯದಲ್ಲಿ ದಟ್ಟಗೊಂಡ ಕುತೂಹಲ..!
ಬಿಜೆಪಿಯ ರಾಷ್ಟ್ರ ನಾಯಕರನ್ನು ವಿಜಯೇಂದ್ರ ಅವರು ಭೇಟಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ ಅದರಲ್ಲೂ ರಾಜ್ಯ ಅದ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಪಟ್ಟಕ್ಕೆ ಪೈಪೋಟಿಯಲ್ಲಿದ್ದವರಿಗೆ ಇರುಸು ಮುರುಸಾಗಿದೆ . ಈ ಹಿನ್ನೆಲೆಯಲ್ಲಿ ಹಲವು ಚರ್ಚೆಗಳು ಮುನ್ನೆಲೆಗೆ ಬಂದಿದ್ದು ಒಳಗೊಳಗೇ ಬಾರಿ ಚರ್ಚೆಗಳು ನೆಡೆಯುತ್ತಿವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಕುರಿತು ಮಾತುಕತೆ ನಡೆದಿದೆಯೇ ಎಂಬ ಗುಮಾನಿಗಳು ಹಲವು ನಾಯಕರಲ್ಲಿ ಹುಡ್ಟಿಕೊಂಡಿದೆ. ಅಥವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಅನ್ನು ಬಗ್ಗುಬಡಿಯಲು ವಿಜಯೇಂದ್ರ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬಹುದೇ ಎಂಬ ಪ್ರಶ್ನೆಗಳು ಎದ್ದಿವೆ.
ಬಿಎಲ್ ಸಂತೋಷ್ ಬಣಕ್ಕೆ ಹಿನ್ನೆಡೆ ಯಾಗುವ ಸಾಧ್ಯತೆ ಹೆಚ್ಚು.?
ಒಂದು ವೇಳೆ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ, ಬಿಎಲ್ ಸಂತೋಷ್ ಅವರ ಬಣಕ್ಕೆ ಬಾರಿ ಮುಖಭಂಗವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪ ನವರನ್ನು ಕಡೆಗಣಿಸಿ
ಬಿ ಎಲ್ ಸಂತೋಷ್ ಅವರ ಮಾತನ್ನು ಕೇಳಿ ಹೀನಾಯವಾಗಿ ಸೋತಿರುವ ಬಿಜೆಪಿ ಮತ್ತೆ ಬಿಎಸ್‌ವೈ ಕುಟುಂಬಕ್ಕೆ ಮಣೆ ಹಾಕುವ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಲಾಗುತ್ತಿದೆ.
ವಿಧಾನಸಭೆ ಚುನಾವಣೆ ಸೋಲಿಗೆ ಬಿಎಲ್ ಸಂತೋಷ್ ಅವರು ತೆಗೆದುಕೊಂಡ ಸಾಕಷ್ಟು ತಪ್ಪು ನಿರ್ಧಾರಗಳೇ ಪಕ್ಷಕ್ಕೆ ಮುಳುವಾಗಿವೆ ಎಂದು ಬಿಎಸ್‌ವೈ ಬಣದ ಶಾಸಕರ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯ ರಾಷ್ಟ್ರ ನಾಯಕರು ಯಾವ ನಿರ್ಧಾರ ತೆಗೆದು ಕೊಳ್ಳಲಿದ್ದಾರೆಂದು ಕಾದು ನೋಡಬೇಕಿದೆ.
ಸುಧೀರ್ ವಿಧಾತ, ಶಿವಮೊಗ್ಗ