ಟಾಸ್ಕ್ ಪೋರ್ಸ್ ರಚಿಸಿ ಮಳೆ ಹಾನಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹ : ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ

ಟಾಸ್ಕ್ ಪೋರ್ಸ್ ರಚಿಸಿ ಮಳೆ ಹಾನಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹ : ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ

ಅಶ್ವಸೂರ್ಯ/ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟದಿಂದಾಗಿ ಸಾಕಷ್ಟು ಮನೆಗಳ ಕುಸಿತ, ಆಸ್ತಿ- ಪಾಸ್ತಿ, ಬೆಳೆ ಹಾನಿ ಸಂಭವಿಸಿದ್ದು, ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ, ತಕ್ಷಣವೇ ಸರ್ಕಾರ ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಡ ಟಾಸ್ಕ್ ಪೋರ್ಸ್ ರಚನೆ ಮಾಡಿ, ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಶಾಸಕ ಡಾ.ಧನಂಜಯ ಸರ್ಜಿ ಅವರು ಸರ್ಕಾರವನ್ನು ಒತ್ತಾಯಿಸಿದರು.
ಮಂಗಳವಾರ ವಿಧಾನ ಪರಿಷತ್ ಅಧಿವೇಶನದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸಾಕಷ್ಟು ಮನೆ, ಆಸ್ತಿ, ಪಾಸ್ತಿ, ಬೆಳೆ ಹಾನಿ ಸಂಭವಿಸಿದ್ದು, ಪ್ರಸ್ತುತ ಅಕ್ಷರಶಃ ಮಳೆನಾಡು ಭಾಗದ ಜನ ಪ್ರವಾಹ ಭೀತಿಯಲ್ಲಿ ಬದುಕುವಂತಾಗಿದೆ ಎಂದು ಅತಿವೃಷ್ಟಿಯಲ್ಲಿ ಅನಾಹುತಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.

ಕಳೆದೊಂದು ವಾರದಿಂದ ಸೂರ್ಯನ ಬೆಳಕನ್ನು ಕಾಣದ ಸ್ಥಿತಿ ನಿರ್ಮಾಣಗೊಂಡಿದೆ, ಮಲೆನಾಡಿನ ಭತ್ತದ ಗದ್ದೆಗಳು ಜಲಾವೃತಗೊಂಡಿವೆ, ನದಿ, ಝರಿ- ತೊರೆ, ಹಳ್ಳ-ಕೊಳ್ಳಗಳು ಉಕ್ಕಿ ಅಡಕೆ ತೋಟಗಳು ಸಂಪೂರ್ಣ ಜಲಮಯವಾಗಿ ಹಾನಿಗೊಳಗಾಗಿವೆ. ಹಲವಾರು ಅಣೆಕಟ್ಟುಗಳು ಭರ್ತಿ ಆಗಿದ್ದು, ನದಿ ಪಾತ್ರದ ಹಳ್ಳಿಗಳ ಜನರು, ಬಾಳೆಹೊನ್ನೂರು ಕರಿಯಮ್ಮನ ಬೀದಿಯಲ್ಲಿ ಮನೆ ಕುಸಿದಿದ್ದು, ಮನೆಯಲ್ಲಿ ವಸ್ತುಗಳೆಲ್ಲಾ ಮಣ್ಣಿನಲ್ಲಿ ಕೊಚ್ಚಿ ಹೋಗಿವೆ, ಇದೇ ರೀತಿ ವಿವಿಧ ಜಿಲ್ಲೆಗಳಲ್ಲಿ ನೂರಾರು ಮನೆಗಳು ಗೋಡೆ ಕುಸಿತ ಉಂಟಾಗಿ ಹಾನಿಗೊಳಗಾಗಿವೆ, ಉಡುಪಿ ಜಿಲ್ಲೆಯಲ್ಲೇ 9 ಮನೆಗಳು ಸಂಪೂರ್ಣ ಕುಸಿದಿದ್ದು, 500 ಕ್ಕೂ ಹೆಚ್ಚು ಮನೆಗಳು ಭಾಗಶ ನಾಶವಾಗಿವೆ, ಸಮುದ್ರ ತೀರದ ಪ್ರದೇಶದಲ್ಲಿ ಕಡಲ ಕೊರೆತ ಉಂಟಾಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿ ಜನ-, ಜಾನುವಾರು ಸೇರಿದಂತೆ ಕೋಟ್ಯಂತರ ರೂ.ಗಳ ಆಸ್ತಿ ಪಾಸ್ತಿ ಹಾನಿಗೊಂಡಿದೆ ಎಂದು ವಿವರಿಸಿದರು.

ಕಳೆದೊಂದು ತಿಂಗಳಿಂದ ಅತಿವೃಷ್ಟಿಯಿಂದ ಹಾನಿ ಸಂಭವಿಸಿದ್ದರೂ ಪ್ರವಾಹದ ನಿರ್ವಹಣೆ ಮಾತ್ರ ನಿರೀಕ್ಷೆಗೆ ತಕ್ಕಂತೆ ಆಗಿಲ್ಲ, ಇದು ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ, ಸರ್ಕಾರದ ಸಚಿವರ ಕಾಟಾಚಾರಕ್ಕೆ ಅಲ್ಲೊಂದು ಇಲ್ಲೊಂದು ಭೇಟಿ ನೀಡಿದ್ದು ಬಿಟ್ಟರೆ ಯಾವುದೇ ರಚನಾತ್ಮಕ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ, ಸರ್ಕಾರ ಕೂಡಲೇ ಉನ್ನತ ಅಧಿಕಾರಿಗಳ ಹಾಗೂ ತಜ್ಞರ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಬೇಕು ಮತ್ತು ತುರ್ತಾಗಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ವಿಶೇಷ ಪರಿಹಾರ ಪ್ಯಾಕಜೇಜ್ ಬಿಡುಗಡೆ ಮಾಡಬೇಕು ಎಂದು ಶಾಸಕ ಡಾ.ಧನಂಜಯ ಸರ್ಜಿ ಸರ್ಕಾರವನ್ನು ಆಗ್ರಹಿಸಿದರು.

Leave a Reply

Your email address will not be published. Required fields are marked *

Optimized by Optimole
error: Content is protected !!