ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಬಂದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕಾರಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು!

ಮಾನ್ಯ ಒಕ್ಕಲಿಗ ಸಮಾಜ ಬಾಂಧವರೇ ನಿಮ್ಮ ಅಮೂಲ್ಯವಾದ ಮತವನ್ನು ಈ ಮೇಲ್ಕಂಡ ಅಭ್ಯರ್ಥಿಗಳಿಗೆ ನೀಡುವ ಮೂಲಕ ಸಮುದಾಯದ ಸೇವೆಗೆ ಅವಕಾಶ ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ🙏

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಬಂದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕಾರಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು!

ಅಶ್ವಸೂರ್ಯ/ಶಿವಮೊಗ್ಗ:  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಆಗಮಿಸಿದ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರ ಬೆಂಗಾವಲು ಪಡೆಯ ವಾಹನದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ.!

ಕಾಡು ಪ್ರಾಣಿಗಳ ಹಾವಳಿ, ನಿಯಂತ್ರಣ ಮತ್ತು ಆನೆ ಕಾರ್ಯಾಚರಣೆ ಕುರಿತು ನಿಗದಿಯಾಗಿರುವ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ್ದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಸಭೆ ಮುಗಿಸಿದ ನಂತರ ತಿರುಗಿ ಆಂಧ್ರಕ್ಕೆ ಹೋಗುವಾಗ ತೆರಳುವಾಗ ವಾಹನದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಇದರಿಂದ ಆತಂಕಕ್ಕೆ ಒಳಗಾದ ಬೆಂಗಾವಲು ಪಡೆಯ ಸಿಬ್ಬಂದಿಗಳು ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಮಾಹಿತಿ ಸಿಕ್ಕ ಕೂಡಲೇ ತಕ್ಷಣವೇ ಧಾವಿಸಿ ಬಂದು ವಾಹನ ಪರಿಶೀಲನೆ ಮಾಡಿದ ಉರಗ ರಕ್ಷಣಾ ತಂಡದ ಸಿಬ್ಬಂದಿಗಳು ಹಾವನ್ನು ರಕ್ಷಣೆ ಮಾಡಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಸಭೆ ನಡೆಸಿದ್ದ ಪವನ್ ಕಲ್ಯಾಣ್,

ಆನೆಗಳ ಸೆರೆ ಕಾರ್ಯಾಚರಣೆ, ಮತ್ತು ಪಳಗಿಸುವ ಕ್ರಮ, ಮಾವುತರಿಗೆ ತರಬೇತಿ ವಿಚಾರವಾಗಿ ಸಭೆಯಲ್ಲಿ ಸಾಕಷ್ಟು ಮಾತನಾಡಿದ್ದರು. ಈ ಸಭೆಯ ಬಳಿಕ ಅರಣ್ಯ ಇಲಾಖೆಗೆ ಭೇಟಿ ನೀಡಿದ್ದ ಪವನ್ ಕಲ್ಯಾಣ್ ಅವರ ವಾಹನದಲ್ಲಿ ಹೆಬ್ಬಾವು ಸೇರಿಕೊಂಡಿದೆ. ಇನ್ನೇನು ಆಂಧ್ರ ಪ್ರದೇಶಕ್ಕೆ ಹೊರಡಲು ಸಿದ್ಧರಾಗಬೇಕು ಎನ್ನುವಷ್ಟರಲ್ಲಿ ಬೆಂಗಾಲವು ಪಡೆಯ ಮುಂಬದಿಯ ಬಾನೆಟ್‌ನಲ್ಲಿ ಹೆಬ್ಬಾವಿನ ತಲೆ ಕಂಡುಬಂದಿದೆ. ಕೂಡಲೇ, ಹೆಬ್ಬಾವಿನ ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ತುಸು ಹೊತ್ತು ಪರದಾಡಿದ್ದಾರೆ.

ಹೆಬ್ಬಾವು ಯಾವುದೇ ಒಂದು ವಸ್ತುವನ್ನು ಗಟ್ಟಿಯಾಗಿ ಸುತ್ತಿಕೊಂಡರೆ ಬಿಡಿಸುವುದು ಸುಲಭದ ಮಾತಲ್ಲ! ಇನ್ನೂ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ವಾಹನದ ಬೆಂಗಾವಲು ಪಡೆಯ ಬಾನೆಟ್‌ ಕೆಳಗೆ ಸುತ್ತಿಕೊಂಡಿದ್ದ ಹೆಬ್ಬಾವು ಹೊರ ತೆಗೆಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಹಾವನ್ನು ಜೋರಾಗಿ ಎಳೆದರೆ ವಾಹನದ ಯಂತ್ರಗಳಿಗೆ ಹಾನಿಯಾಗುತ್ತದೆ. ಹೀಗಾಗಿ, ಹುಷಾರಾಗಿ ಹೆಬ್ಬಾವನ್ನು ಹೊರಗೆ ತೆಗೆಯಲು ಪರದಾಡಿದ್ದಾರೆ. ಕೊನೆಗೂ ಈ ಕಾರ್ಯಚರಣೆಯಲ್ಲಿ ಯಾವುದೇ ಅನಾಹುತ ಆಗದಿ ಹಾವನ್ನು ರಕ್ಷಣೆಮಾಡಿ ಸುರಕ್ಷಿತ ಸ್ಥಳಕ್ಕೆ ಒಯ್ದು ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!